ಡೈಲಿ ವಾರ್ತೆ: 26 ಜುಲೈ 2023

ವೀರಕಂಭ ಹಿರಿಯ ಪ್ರಾಥಮಿಕ ಶಾಲೆಗೆ ಮುಖ್ಯ ಶಿಕ್ಷಕಿಯಾಗಿ ನೇಮಕಗೊಂಡ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಗೆ ಸ್ವಾಗತ.

ಬಂಟ್ವಾಳ : ವೀರಕಂಬ ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಮುಖ್ಯ ಶಿಕ್ಷಕಿ ಹುದ್ದೆಗೆ ವರ್ಗಾವಣೆಯ ಮೂಲಕ ಸೇವೆಗೆ ಸೇರಿದ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಅವರನ್ನು ಶಾಲಾ ಮಕ್ಕಳು ಶಿಕ್ಷಕ ವೃಂದ ಹೂಗುಚ್ಛ ನೀಡಿ ಸ್ವಾಗತಿಸಿದರು.

ಮುಖ್ಯ ಶಿಕ್ಷಕಿಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಶಾಲೆಯ ಶೈಕ್ಷಣಿಕ ಹಾಗೂ ಭೌತಿಕ ಅಭಿವೃದ್ಧಿಯನ್ನು ಮಾಡುವಲ್ಲಿ ಹಾಗೂ ಉತ್ತಮ ಫಲಿತಾಂಶ ಪಡೆದು ಮಾದರಿ ಶಾಲೆಯನ್ನಾಗಿ ರೂಪಿಸಲು ಎಲ್ಲಾ ಶಿಕ್ಷಕ ವೃಂದದ ಸಹಕಾರವನ್ನು ಯಾಚಿಸಿದರು.