ಡೈಲಿ ವಾರ್ತೆ:26 ಜುಲೈ 2023

ಉಡುಪಿ:ವಿಡಿಯೋ ಚಿತ್ರೀಕರಣ ಪ್ರಕರಣ – ಸುಳ್ಳು ಸುದ್ದಿ ಹರಡಿರುವುದು ಸೇರಿ 2 ಪ್ರತ್ಯೇಕ ಕೇಸ್ ದಾಖಲು!

ಉಡುಪಿ: ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಮಲ್ಪೆ ಪೊಲೀಸರು, ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ.ಬಿ. ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಕಲಂ: 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲಿಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚುವ ಉದ್ದೇಶದಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಹಾಗೂ
ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಮೂಲಕ ವಿಡಿಯೋ ಚಿತ್ರೀಕರಿಸಿ ಫಾರ್ವಡ್ ಮಾಡಿದ್ದಾರೆ ಎಂದು ಎಡಿಟ್ ಮಾಡಿದ ವಿಡಿಯೋ ಅಪ್ಲೋಡ್ ಮಾಡಿ ಟ್ವಿಟ್ಟರ್ ನಲ್ಲಿ ಸುಳ್ಳು ಸುದ್ದಿ ಹಂಚಿಕೆ ಬಗ್ಗೆಯೂ ಪ್ರತ್ಯೇಕ ದೂರು ದಾಖಲಾಗಿದೆ.