ಡೈಲಿ ವಾರ್ತೆ:26 ಜುಲೈ 2023

ಸ್ಕೂಟರ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್: ಸವಾರ ಸ್ಥಳದಲ್ಲೇ ಮೃತ್ಯು!

ಕೋಲಾರ: ಖಾಸಗಿ ಬಸ್ಸೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಅನಿಗಾನಹಳ್ಳಿ ಗೇಟ್ ಬಳಿ ನಡೆದಿದೆ.

ಮೃತ ಸ್ಕೂಟರ್ ಸವಾರನನ್ನು ಅಕ್ಕಯ್ಯಮ್ಮನದಿನ್ನೆ ಗ್ರಾಮದ ಮುರಳಿ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಖಾಸಗಿ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಬಂಗಾರಪೇಟೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.