ಡೈಲಿ ವಾರ್ತೆ:27 ಜುಲೈ 2023
ಸುಲಿಗೆ ಪ್ರಕರಣ: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಇಪ್ಪತ್ತ ಮೂರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಉಳ್ಳಾಲದ ದುರ್ಗಾ ಕ್ವಾಟ್ರಾಸ್ ನಿವಾಸಿಯಾಗಿರುವ ಬಶೀರ್ (51) ಎನ್ನಲಾಗಿದೆ.
ಏನಿದು ಪ್ರಕರಣ: 2000 ರ ಡಿಸೆಂಬರ್ 17 ರ ರಾತ್ರಿ 8:45 ಗಂಟೆಗೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಚೂರಿ ತೋರಿಸಿ ಮಹಿಳೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಪರಾರಿಯಗಿದ್ದರು ಈ ಘಟನೆಗೆ ಸಂಬಂಧಿಸಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಮೊಹಮ್ಮದ್ ಹುಸೇನ್ ಬಶೀರ್ ಮತ್ತು ಮೊಯ್ದೀನ್ ಕುದ್ರೋಳಿ ಇಬ್ಬರನ್ನು ದಸ್ತಗಿರಿ ಮಾಡಲಾಗಿತ್ತು ಆದರೆ ಆರೋಪಿ ಬಶೀರ್ ಎಂಬಾತ ತಲೆ ಮರೆಸಿಕೊಂಡಿದ್ದು ಈತನ ವಿರುದ್ದ ನ್ಯಾಯಾಲಯವು ಉದ್ಘೋಷಣೆಯನ್ನು ಹೊರಡಿಸಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ.
ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.