ಡೈಲಿ ವಾರ್ತೆ:27 ಜುಲೈ 2023
ನಿರಂತರ ಮಳೆಯಿಂದ ಕೊಪ್ಪದಲ್ಲಿ 90 ಅಡಿ ಕುಸಿದ ಭೂಮಿ.!
ಚಿಕ್ಕಮಗಳೂರು : ಮಲೆನಾಡಿನಲ್ಲಿ ಮಳೆ ಅವಾಂತರಗಳು ಮುಂದುವರೆದಿದ್ದು, ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಕೊಪ್ಪ ತಾಲೂಕಿನ ಹೆರೂರು ಗ್ರಾಮದಲ್ಲಿ ಭೂಮಿ ಸುಮಾರು 90 ಅಡಿ ಕುಸಿದಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
ಏಳಕ್ಕೂ ಹೆಚ್ಚು ಊರುಗಳಿಗೆ ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು,ಮತ್ತಷ್ಟು ಕುಸಿಯುವ ಭೀತಿ ಎದುರಾಗಿದೆ. ಶಾಂತಿ ಕೂಡಿಗೆ, ಶುಂಠಿ ಕೂಡಿಗೆ, ಬಿಟ್ಟ ಕೂಡಿಗೆ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಮಳೆ ಹೆಚ್ಚಾದಂತೆ ಸ್ವಲ್ಪ ಸ್ವಲ್ಪವೇ ಭೂಮಿ ಜರಿತ ಉಂಟಾಗುತ್ತಿದೆ.
ಕೊಪ್ಪ ತಾಲೂಕಿನ ಹೆರೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಾಮಗಳ ಜನತೆ ಮಳೆ ಅವಾಂತರಗಳಿಂದ ಕಂಗಾಲಾಗಿದ್ದಾರೆ.