ಡೈಲಿ ವಾರ್ತೆ:28 ಜುಲೈ 2023

ಅರೋಗ್ಯ: ಖಾಲಿ ಹೊಟ್ಟೆಯಲ್ಲಿ ಹಣ್ಣುಗಳನ್ನು ತಿನ್ನಿ – ಅನಾರೋಗ್ಯದಿಂದ ದೂರ ಇರಿ

ಪ್ರತಿದಿನ ಹಣ್ಣುಗಳನ್ನು ತಿನ್ನುವುದರಿಂದ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಹಣ್ಣುಗಳು ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳನ್ನು ಹೊಂದಿರುತ್ತವೆ. ಆದರೆ ಖಾಲಿ ಹೊಟ್ಟೆಯಲ್ಲಿ ಹಣ್ಣುಗಳನ್ನು ತಿನ್ನುವುದರಿಂದ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ತಿಳಿದರೆ ನೀವು ಎಂದಿಗೂ ಈ ಅಭ್ಯಾಸವನ್ನು ಬಿಡುವುದಿಲ್ಲ.

ಹಣ್ಣುಗಳಲ್ಲಿ ಹೆಚ್ಚಿನ ಪೋಶಕಾಂಶ ಇರುವುದರಿಂದ ವೈದ್ಯರು ಕೂಡ ಪ್ರತಿದಿನ ವಿವಿಧ ರೀತಿಯ ಹಣ್ಣುಗಳನ್ನು ತಿನ್ನುವುದು ಒಳ್ಳೆಯದು ಎಂದು ಹೇಳುತ್ತಾರೆ. ಹಣ್ಣುಗಳು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತವೆ. ಆದರೆ ಖಾಲಿ ಹೊಟ್ಟೆಯಲ್ಲಿ ಕೆಲವು ಹಣ್ಣುಗಳನ್ನು ತಿನ್ನುವುದು ಅದ್ಭುತ ಫಲಿತಾಂಶವನ್ನು ನೀಡುತ್ತದೆ. ಅಂತಹ ವಿಷಯಗಳ ಬಗ್ಗೆ ಈಗ ತಿಳಿಯೋಣ…

ಬೆಳಿಗ್ಗೆ, ವ್ಯಾಯಾಮದ ಮೊದಲು ಮತ್ತು ನಂತರ ಹಣ್ಣುಗಳನ್ನು ಸೇವಿಸುವುದು ಉತ್ತಮ. ಮಲಬದ್ಧತೆ, ಕರುಳಿನ ಕ್ಯಾನ್ಸರ್, ಅತಿಸಾರ, ಮೂಳೆಗಳ ಆರೋಗ್ಯ, ಮೆದುಳಿನ ಆರೋಗ್ಯ, ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಂದ ದೂರವಿರಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ:
ಖಾಲಿ ಹೊಟ್ಟೆಯಲ್ಲಿ ಹಣ್ಣುಗಳನ್ನು ತಿನ್ನುವುದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಹಣ್ಣಿನಲ್ಲಿರುವ ಫೈಬರ್ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಹಣ್ಣುಗಳು ಕಾರ್ಬೋಹೈಡ್ರೇಟ್‌ಗಳಿಂದ ತುಂಬಿರುವುದರಿಂದ ಅವು ದೇಹಕ್ಕೆ ಉತ್ತಮ ಶಕ್ತಿಯನ್ನು ನೀಡುತ್ತವೆ.

ರಕ್ತದೊತ್ತಡ ನಿಯಂತ್ರಣ: ಖಾಲಿ ಹೊಟ್ಟೆಯಲ್ಲಿ ಹಣ್ಣುಗಳನ್ನು ತಿನ್ನುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಕೆಲವು ಹಣ್ಣುಗಳಲ್ಲಿ ಇರುವ ನೈಸರ್ಗಿಕ ಸಕ್ಕರೆಗಳು, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಚರ್ಮದ ಆರೋಗ್ಯ: ಬೆಳಿಗ್ಗೆ ಹಣ್ಣುಗಳನ್ನು ತಿನ್ನುವುದರಿಂದ ನಿಮ್ಮ ತ್ವಚೆಯು ಆರೋಗ್ಯಕರವಾಗಿರುತ್ತದೆ.