



ಡೈಲಿ ವಾರ್ತೆ: 29 ಜುಲೈ 2023


ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಮೃತ್ಯು, ಹಲವರಿಗೆ ಗಾಯ
ತಮಿಳುನಾಡು: ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಸಮೀಪದ ಹೋಟೆಲ್ ಕಟ್ಟಡ ಕುಸಿದು ಉಳಿದ ನಾಲ್ಕು ಕಟ್ಟಡಗಳಿಗೆ ಭಾಗಶಃ ಹಾನಿಯಾಗಿದ್ದು, ಹಲವರು ಸಿಲುಕಿಕೊಂಡಿದ್ದಾರೆ.
ಘಟನಾ ಸ್ಥಳದಲ್ಲಿ ರಕ್ಷಣಾಕಾರ್ಯ ಮುಂದುವರೆದಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹಲವಾರು ಕಟ್ಟಡದ ಅಡಿಯಲ್ಲಿ ಸಿಲುಕಿರುವ ಕುರಿತು ಶಂಕೆ ವ್ಯಕ್ತವಾಗಿದ್ದು ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ.
ಘಟನೆ ಹೇಗೆ ನಡೆಯಿತು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.