



ಡೈಲಿ ವಾರ್ತೆ: 29 ಜುಲೈ 2023


ಉಡುಪಿ ವೀಡಿಯೋ ಪ್ರಕರಣ: ಗೌಪ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯರ ವಿಚಾರಣೆ
ಉಡುಪಿ: ನಗರದ ಖಾಸಗಿ ಕಾಲೇಜಿನ ಟಾಯ್ಲೆಟ್‍ನಲ್ಲಿ ವೀಡಿಯೋ ಚಿತ್ರೀಕರಿಸಿದ ಮೂವರು ಆರೋಪಿತ ವಿದ್ಯಾರ್ಥಿನಿಯರನ್ನು ಗೌಪ್ಯ ಸ್ಥಳದಲ್ಲಿ ಮಲ್ಪೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ವಿದ್ಯಾರ್ಥಿನಿಯರಿಂದ ಪ್ರತ್ಯೇಕವಾಗಿ ಹೇಳಿಕೆಗಳನ್ನು ದಾಖಲು ಮಾಡಲಾಗಿದೆ. ಪೊಲೀಸರ ತನಿಖೆಗೆ ಖುದ್ದು ಹಾಜರಾಗಬೇಕು ಎಂದು ಉಡುಪಿ ಜೆಎಂಎಫ್‍ಸಿ ನ್ಯಾಯಾಲಯ ಜಾಮೀನು ಕೊಡುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಸೂಚಿಸಿತ್ತು. ಈ ನಡುವೆ ಎರಡು ಬಾರಿ ಭೇಟಿಯಾಗಿ ಸಂತ್ರಸ್ತ ವಿದ್ಯಾರ್ಥಿನಿಯ ಹೇಳಿಕೆಯನ್ನೂ ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಇದರ ನಡುವೆ ಬಿಜೆಪಿ ಪ್ರತಿಭಟನೆಯ ನಂತರ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತನಿಖಾಧಿಕಾರಿಯನ್ನು ಬದಲಾಯಿಸಬೇಕು ಎಂಬ ಒತ್ತಡ ಬಂದ ನಂತರ ಮಲ್ಪೆ ಇನ್ಸ್‌ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲಿಗೆ ಕುಂದಾಪುರದ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ತನಿಖೆಗೆ ನಿಯೋಜಿಸಲಾಗಿದೆ.