ಡೈಲಿ ವಾರ್ತೆ:01 ಆಗುಸ್ಟ್ 2023
ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ‘ಮದ್ರಾಸ್ ಐ’ : ಲಕ್ಷಣಗಳು, ಮುಂಜಾಗ್ರತಾ ಕ್ರಮಗಳ ಕುರಿತು ತಿಳಿಯಿರಿ.!
ಅರೋಗ್ಯ: ಆರೋಗ್ಯ ಇಲಾಖೆಯೂ ‘ಮದ್ರಾಸ್ ಐ’ ವೈರಾಣುವಿನಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಮಾರ್ಗಸೂಚಿ ಹೊರಡಿಸಿದೆ.
ಕಂಜಕ್ಟಿವೈಟಿಸ್ ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ ಕಣ್ಣು ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟುಮಾಡುತ್ತದೆ.
ಈ ಸಲ ರಾಜ್ಯದಲ್ಲಿ ಮಳೆಗಾಲಕ್ಕೂ ಮುಂಚಿತವಾಗಿ ‘ಮದ್ರಾಸ್ ಐ’ ಪ್ರಕರಣ ಕಾಲಿಟ್ಟಿತ್ತು. ಈ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.
ಮದ್ರಾಸ್ ಐ ರೋಗ ಲಕ್ಷಣಗಳು :
*ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
* ಅತಿಯಾದ ಕಣ್ಣೀರು
* ಕಣ್ಣಿನಲ್ಲಿ ತುರಿಕೆ
* ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
* ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
* ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು
* ದೃಷ್ಟಿ ಮಂಜಾಗುವುದು
ಮದ್ರಾಸ್ ಐ ಬಗ್ಗೆ ಮುಂಜಾಗ್ರತಾ ಕ್ರಮ :
* ವೈಯಕ್ತಿಕವಾಗಿ ಸ್ವಚ್ಛತೆಗೆ ಆದ್ಯತೆ ಕೊಡಿ
* ಸೋಂಕಿತ ವ್ಯಕ್ತಿ ಬಳಸಿದ ಕರವಸ್ತ್ರ ಮತ್ತು ಇತರ ವಸ್ತುಗಳನ್ನ ಬಳಸಬಾರದು
* ಸೋಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು
* ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು
* ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು – ತೀವ್ರ ಸೋಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು.