



ಡೈಲಿ ವಾರ್ತೆ:03 ಆಗಸ್ಟ್ 2023


ಉಳ್ಳಾಲ: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಉಳ್ಳಾಲ:ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತ್ತಾರ್ ಸುಭಾಷ್ ನಗರದಲ್ಲಿ ನಡೆದಿದೆ.
ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್(17)ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ಪ್ರಥಮ ಪಿಯುಸಿಯನ್ನು ಮುಗಿಸಿದ್ದ ಸುಶಾಂತ್ ಗೆ ಡಿಪ್ಲೊಮಾಗೆ ನಿನ್ನೆ ಸೇರಿಸಲಾಗಿತ್ತು. ನಿನ್ನೆ 500ರೂ. ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಿಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲಿದ್ದ ಸುಶಾಂತ್ ಕೋಣೆಯೊಳಗೆ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಬಗ್ಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.