



ಡೈಲಿ ವಾರ್ತೆ:03 ಆಗಸ್ಟ್ 2023

ಸಿದ್ದಕಟ್ಟೆ: ಯುವಕ ನಾಪತ್ತೆ.!
ಬಂಟ್ವಾಳ : ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆ ನಿವಾಸಿ  ಸಂದೀಪ್ ಜೈನ್ ಎಂಬಾತ ನಾಪತ್ತೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಸಂದೀಪ್ ಜೈನ್ ಅವರು ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಲ್ ಬೆಟ್ಟು ಎಂಬಲ್ಲಿ ವಾಸ್ತವ್ಯವಿದ್ದು, ಪ್ರಸ್ತುತ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿರುವ ಜೈನ್ ರೆಸ್ಟೋರೆಂಟ್ ಎಂಬ ಹೆಸರಿನ ಹೋಟೆಲ್ ನಡೆಸಿಕೊಂಡಿದ್ದರು.  ಜು.31 ರಂದು ಕೈ ನೋವು ಚಿಕಿತ್ಸೆಗಾಗಿ ವೈದ್ಯರ ಬಳಿ ಹೋಗಿ ಬರುತ್ತೇನೆ ಎಂದು ಹೋಟೆಲ್ ನಿಂದ ಆಕ್ಟೀವಾ ಸ್ಕೂಟರ್ ನಲ್ಲಿ ತೆರಳಿದ ಅವರು ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. 
ಈ ಬಗ್ಗೆ ಸಂದೀಪ್ ಅವರ ಪತ್ನಿ ಅಕ್ಷತಾ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು  ಪ್ರಕರಣ ದಾಖಲಿಸಿಕೊಂಡಿರುವ ಪುಂಜಾಲಕಟ್ಟೆ ಪೊಲೀಸರು ಸಂದೀಪ್ ಪತ್ತೆಯಾದಲ್ಲಿ 08256-286375 ಅಥವಾ 0824-2220500 ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.
