ಡೈಲಿ ವಾರ್ತೆ:07 ಆಗಸ್ಟ್ 2023
ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಹೃದಯಾಘಾತದಿಂದ ಮೃತ್ಯು.!
ಸ್ಯಾಂಡಲ್‌ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಅವರು ನಿಧನರಾಗಿದ್ದಾರೆ. ಇಂದು ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ.
ವಿಜಯ್ ಪತ್ನಿ ಸ್ಪಂದನ ಅವರು ಇತ್ತೀಚಿಗೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಪ್ಪು ನಿಧನದ ಶಾಕ್‌ನಿಂದ ಹೊರ ಬಂದಾಗಲೇ ಮತ್ತೊಂದು ಆಘಾತಕಾರಿ ವಿಚಾರ ಕುಟುಂಬಕ್ಕೆ ಶಾಕ್ ನೀಡಿದೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ.
ನಾಳೆ ಬೆಂಗಳೂರಿಗೆ ವಿಜಯ್ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ. ನಿವೃತ್ತ ಅಸಿಸ್ಟೆಂಟ್ ಪೊಲೀಸ್ ಆಫೀಸರ್ ಬಿ.ಕೆ ಶಿವರಾಮ್ ಅವರ ಪುತ್ರಿ ಸ್ಪಂದನ ಅವರು ವಿಜಯ್ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಈ ಜೋಡಿಗೆ ಒಬ್ಬ ಮಗನಿದ್ದಾನೆ.