



ಡೈಲಿ ವಾರ್ತೆ:09 ಆಗಸ್ಟ್ 2023


ಕಿನ್ನಿಗೋಳಿ: ಕಾರು ಹಾಗೂ ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ – ಓರ್ವ ಸಾವು – ಇನ್ನೋರ್ವ ಗಂಭೀರ!
ಕಿನ್ನಿಗೋಳಿ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದು ಒಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.

ಕಿನ್ನಿಗೋಳಿಯ ಮೂರು ಕಾವೇರಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಬಳಿ ಟಿಪ್ಪರ್ ಹಾಗೂ ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರು ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.