ಡೈಲಿ ವಾರ್ತೆ:10 ಆಗಸ್ಟ್ 2023
ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಸಮಬಲದ ಹೋರಾಟ, ಅದೃಷ್ಟ ಪರೀಕ್ಷೆಯಲ್ಲಿ ಗದ್ದುಗೆ ಏರಿದ ಕಾಂಗ್ರೆಸ್ ಬೆಂಬಲಿತರು.
ವಿಟ್ಲ : ವೀರಕಂಭ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಲಲಿತಾ ಹಾಗೂ ಉಪಾಧ್ಯಕ್ಷರಾಗಿ ಜನಾರ್ಧನ ಪೂಜಾರಿ ಆಯ್ಕೆಯಾಗಿದ್ದಾರೆ.
ವೀರಕಂಭ ಗ್ರಾಮ ಪಂಚಾಯತ್ ಒಟ್ಟು 14 ಸದಸ್ಯರನ್ನು ಹೊಂದಿದ್ದು ಈ ಪೈಕಿ 7 ಕಾಂಗ್ರೆಸ್ ಬೆಂಬಲಿತ, 7 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸದಸ್ಯರಾಗಿ ಆಯ್ಕೆಯಾಗಿದ್ದರು.
ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಲಲಿತಾ ಮತ್ತು ಜಯಂತಿ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಜನಾರ್ಧನ್ ಪೂಜಾರಿ ಮತ್ತು ಸಂದೀಪ್ ಪೂಜಾರಿ ನಾಮಪತ್ರ ಸಲ್ಲಿಸಿದ್ದರು. ಅಭ್ಯರ್ಥಿಗಳು ಮತದಾನದಲ್ಲಿ 7, 7 ಸಮಾನ ಮತಗಳನ್ನು ಪಡೆದಿದ್ದು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಗಿ ಅದೃಷ್ಟ ಪರೀಕ್ಷೆಯಲ್ಲಿ ಎರಡೂ ಸ್ಥಾನಗಳೂ ಕಾಂಗ್ರೆಸ್ ಬೆಂಬಲಿತರ ಪಾಲಾಯಿತು.
ಜಿ.ಪಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ ಜಿ.ಕೆ. ನಾಯ್ಕ್ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.