ಡೈಲಿ ವಾರ್ತೆ:12 ಆಗಸ್ಟ್ 2023
ಚಿಕ್ಕಮಗಳೂರು: ಬಸ್, ಕಾರು ನಡುವೆ ಭೀಕರ ಅಪಘಾತ – ತಾಯಿ-ಮಗ ಸ್ಥಳದಲ್ಲೇ ಮೃತ್ಯು, ಇನ್ನೋರ್ವನ ಸ್ಥಿತಿ ಗಂಭೀರ.!
ಚಿಕ್ಕಮಗಳೂರು:ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರೊಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ವರದಿಯಾಗಿದೆ.
ಪೂಜಾ ಹಿರೇಮಠ, ರಾಜಶೇಖರ್ ಹಿರೇಮರ್ ಮೃತರು ಎಂದು ಗುರುತಿಸಲಾಗಿದೆ. ಮೃತರು ಮೂಲತಃ ಬೆಂಗಳೂರಿನ ಕೋಣನಕುಂಟೆಯವರು ಎಂದು ತಿಳಿದು ಬಂದಿದೆ.
ದುರ್ಘಟನೆಯಲ್ಲಿ ಶಿವಯಾಗಯ್ಯ ಹಿರೇಮಠ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಮತ್ತು ಸಕಲೇಶಪುರದಿಂದ ಮೂಡಿಗೆರೆ ಕಡೆ ಬರುತ್ತಿದ್ದ ಸರ್ಕಾರಿ ಬಸ್ ಮುಖಾಮುಖಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.