ಡೈಲಿ ವಾರ್ತೆ:12 ಆಗಸ್ಟ್ 2023
ತೀರ್ಥಹಳ್ಳಿ: ಅಕ್ರಮ ಗಾಂಜಾ ಸಾಗಾಟ – ಮೂವರ ಬಂಧನ
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಶಿವಮೊಗ್ಗ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಮಾಳೂರಿನಲ್ಲಿ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 200 ಗ್ರಾಂ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ.
ಮೂವರು ಆರೋಪಿಗಳಾದ ಯೂನಸ್, ಲತೀಫ್, ಮನೋಜ್ ನ್ನು ಬಂಧಿಸಿಲಾಗಿದೆ.
ಆರೋಪಿಗಳು ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಗಾಂಜಾ ಸಾಗಿಸುತ್ತಿರುವಾಗ ಕಾರಿನಲ್ಲಿ ಗಾಂಜಾ ಲಭಿಸಿದೆ ಎಂದು ತಿಳಿದು ಬಂದಿದೆ.
ತೀರ್ಥಹಳ್ಳಿಯಲ್ಲಿ ಗಾಂಜಾ ವಿಪರೀತ ಪ್ರಮಾಣದಲ್ಲಿ ಬಳಕೆಯಾಗುತ್ತಿದ್ದು ಪೊಲೀಸರು ವಿಶೇಷ ತನಿಖೆ ನಡೆಸಲು ಮುಂದಾಗಿದ್ದಾರೆ. ಕೋಣಂದೂರಿನಲ್ಲಿ ತೋಟವೊಂದರಲ್ಲಿ ಬೆಳೆದಿದ್ದ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ಇದೀಗ ಮಾಳೂರಿನಲ್ಲಿ ತನಿಖೆ ವೇಳೆ ಗಾಂಜಾ ಸಾಗಿಸುತ್ತಿದ್ದ ಪ್ರಕರಣ ದಾಖಲಾಗಿದೆ. ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕವಾಗಿ ಪ್ರಶಂಸೆ ವ್ಯಕ್ತವಾಗುತ್ತಿದೆ.