ಡೈಲಿ ವಾರ್ತೆ:13 ಆಗಸ್ಟ್ 2023
ಹೆಬ್ರಿ:ಸ್ಕೂಟಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು
ಹೆಬ್ರಿ: ಚಾಲಕನ ನಿಯಂತ್ರಣ ತಪ್ಪಿ ಸ್ಕೂಟಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ವರಂಗ ಪೇಟೆಯಲ್ಲಿ ಭಾನುವಾರ ಸಂಭವಿಸಿದೆ.
ಸೂರಿಮಣ್ಣು ಪ್ರಭಾಚಂದ್ರ ಆಚಾರ್ಯ (50) ಎಂಬವರೇ ದಾರುಣವಾಗಿ ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ.
ಪ್ರಭಾಚಂದ್ರ ಅವರು ಮುನಿಯಾಲಿನಿಂದ ಸೂರಿಮಣ್ಣು ಕಡೆಗೆ ಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಅವಿವಾಹಿತರಾಗಿರುವ ಮೃತರು ಓರ್ವ ಸಹೋದರ ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.