ಡೈಲಿ ವಾರ್ತೆ:17 ಆಗಸ್ಟ್ 2023

ಮಧುಮೇಹಕ್ಕೆ ಮದ್ದು ಈ ಹಣ್ಣು: ರೋಗಿಗಳಿಗೆ ನೀಡುವ ಅದ್ಭುತ ಪ್ರಯೋಜನಗಳ ಮಾಹಿತಿ ಇಲ್ಲಿದೆ

ಅರೋಗ್ಯ: ಮಧುಮೇಹವನ್ನು ಸೈಲೆಂಟ್ ಕಿಲ್ಲರ್ ಎಂದೇ ಹೇಳಬಹುದು. ಒಮ್ಮೆ ಶುಗರ್ ಬಂದರೆ ಸಂಪೂರ್ಣವಾಗಿ ಗುಣವಾಗುವುದಿಲ್ಲ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ದೀರ್ಘಕಾಲದವರೆಗೆ ನಿಯಂತ್ರಿಸದಿದ್ದರೆ, ಮೂತ್ರಪಿಂಡ, ನರ ಮತ್ತು ಕಣ್ಣಿನ ಸಮಸ್ಯೆಗಳ ಅಪಾಯವು ಹೆಚ್ಚಾಗುತ್ತ ಹೋಗುತ್ತದೆ. ಮಧುಮೇಹ ರೋಗಿಗಳು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಆರೋಗ್ಯಕರ ಜೀವನ ನಡೆಸಬಹುದು.

ಔಷಧಿ, ಪೋಷಣೆ ಮತ್ತು ನಿಯಮಿತ ವ್ಯಾಯಾಮದ ಮೂಲಕ ಮಧುಮೇಹವನ್ನು ನಿಯಂತ್ರಿಸಬಹುದು ಎಂದು ತಜ್ಞರು ಹೇಳುತ್ತಾರೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಅನೇಕ ಹಣ್ಣುಗಳು ಮತ್ತು ತರಕಾರಿಗಳಲ್ಲಿ ಪೇರಲವೂ ಒಂದಾಗಿದೆ. ಪೇರಲವು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಪೇರಲ ಮಧುಮೇಹ ರೋಗಿಗಳಿಗೆ ಔಷಧಿಯಾಗಿ ಕೆಲಸ ಮಾಡುತ್ತದೆ. ಡಯಾಬಿಟಿಸ್ ರೋಗಿಗಳಿಗೆ ತಮ್ಮ ಆಹಾರದಲ್ಲಿ ಪೇರಲವನ್ನು ಸೇರಿಸುವುದು ಪ್ರಯೋಜನಕಾರಿ ಪೌಷ್ಟಿಕತಜ್ಞರು ಹೇಳುತ್ತಾರೆ.

ಪೇರಲವು ಕಬ್ಬಿಣ, ನಾರಿನಂಶ ಮತ್ತು ವಿಟಮಿನ್ ಸಿಯನ್ನು ಒಳಗೊಂಡಿದ್ದು, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಟೈಪ್ 2 ಡಯಾಬಿಟಿಸ್ ರೋಗಿಗಳಿಗೆ ಈ ಪೋಷಕಾಂಶಗಳು ವಿಶೇಷವಾಗಿ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಪೇರಲವು ಉತ್ತಮ ಪ್ರಮಾಣದ ಫೈಬರ್ ಹೊಂದಿರುವುದರಿಂದ ಹಸಿವನ್ನು ನಿಗ್ರಹಿಸುವುದರ ಜತೆಗೆ ಅಗತ್ಯಕ್ಕಿಂತ ಹೆಚ್ಚಾಗಿ ತಿನ್ನುವುದನ್ನು ತಡೆಯುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ತೂಕವನ್ನು ನಿಯಂತ್ರಿಸುವುದು ಬಹಳ ಮುಖ್ಯವಾಗಿದೆ.

ಪೇರಲದಲ್ಲಿರುವ ಪೋಷಕಾಂಶಗಳು ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಪೊಟ್ಯಾಸಿಯಮ್ನಿಂದ ಸಮೃದ್ಧವಾಗಿದ್ದು, ರಕ್ತದೊತ್ತಡವನ್ನು ಕಡಿಮೆ ಮಾಡಲು ಪೊಟ್ಯಾಸಿಯಮ್ ಸಹಾಯಕಾರಿಯಾಗಿದೆ. ಪೊಟ್ಯಾಸಿಯಮ್ ಮತ್ತು ಸೋಡಿಯಂ ಕೆಲವು ಸಲ ಅಡ್ಡ ಪರಿಣಾಮಗಳನ್ನು ಕಡಿಮೆ ಮಾಡುತ್ತದೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡವು ಅನೇಕ ತೊಡಕುಗಳಿಗೆ ಕಾರಣವಾಗಬಹುದು ಎಂಬುದನ್ನು ನೆನಪಿಡಿ.

ಪೇರಲದಲ್ಲಿ ನಾರಿನಂಶ ಹೇರಳವಾಗಿದೆ. ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳಿಗೆ ಸರಿಯಾದ ಜೀರ್ಣಕ್ರಿಯೆ ಬಹಳ ಮುಖ್ಯ. ಆಹಾರ ಸರಿಯಾಗಿ ಜೀರ್ಣವಾದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತದೆ. ಈ ವಿಷಯವು ಸಾಮಾನ್ಯ ಮಾಹಿತಿ ಮತ್ತು ಸಲಹೆಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ಸ್ವಂತ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.