



ಡೈಲಿ ವಾರ್ತೆ:17 ಆಗಸ್ಟ್ 2023


ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸತೀಶ್ ಕುಂದರ್ ಬಾರಿಕೆರೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಸರಸ್ವತಿ ಆಯ್ಕೆ

ಕೋಟ: ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ಕೋಟತಟ್ಟು ಇದರ ಎರಡನೇ ಅವಧಿಯ ಅಧ್ಯಕ್ಷರಾಗಿ ಸತೀಶ್ ಕುಂದರ್ ಬಾರಿಕೆರೆ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಸರಸ್ವತಿ ಅವರು ಅವಿರೋಧವಾಗಿ
ಆಯ್ಕೆಯಾಗಿದ್ದಾರೆ.
ಆಯ್ಕೆಯಾಗಿರುವ ಇಬ್ಬರೂ ಬಿಜೆಪಿ ಬೆಂಬಲಿಗರಾಗಿದ್ದು, ಮೀಸಲಾತಿಯಂತೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಅ ಮಹಿಳೆ ವರ್ಗಕ್ಕೆ ಮೀಸಲಾಗಿತ್ತು.
ಆಯ್ಕೆ ಪ್ರಕ್ರಿಯೆಗೆ ಜಿಲ್ಲಾಧಿಕಾರಿಯವರು ಉಮಾ ಪಿ. ಉಪ ಪ್ರಾಂಶುಪಾಲರು ಸರಕಾರಿ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಅವರನ್ನು ಗೊತ್ತು ಪಡಿಸಿದ ಅಧಿಕಾರಿಯನ್ನಾಗಿ ನೇಮಿಸಿದ್ದು ಅದರಂತೆ ಅವರು ಇಂದು ಆಯ್ಕೆ ಪ್ರಕ್ರಿಯೆಯನ್ನು ನಡೆಸಿದರು.
13 ಜನ ಸದಸ್ಯರನ್ನು ಹೊಂದಿರುವ ಗ್ರಾ.ಪಂ ನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ ನಾಮ ಪತ್ರ ಸಲ್ಲಿಕೆಯಾಗಿತ್ತು. ಅದನ್ನು ಪರಿಶೀಲಿಸಿದ ಆಧಿಕಾರಿಯವರು ಚುನಾಯಿತ ಪ್ರತಿನಿಧಿಗಳ ಸಭೆ ನಡೆಸಿ ಅವಿರೋಧ ಆಯ್ಕೆಯಾಗಿರುವುದಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಮಾಜಿ ಅಧ್ಯಕ್ಷೆ ಅಶ್ವಿನಿ, ಮಾಜಿ ಉಪಾಧ್ಯಕ್ಷ ವಾಸು ಪಿ. ಹಾಗೂ ಎಲ್ಲಾ ಪಂಚಾಯತ್ ಸದಸ್ಯರು ಮತ್ತು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.