ಡೈಲಿ ವಾರ್ತೆ:18 ಆಗಸ್ಟ್ 2023
ಮಂಗಳೂರು: ರೋಗಿಯನ್ನು ತುರ್ತಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ಪಲ್ಟಿ – ಚಾಲಕ ಮೃತ್ಯು
ಬಂಟ್ವಾಳ : ರೋಗಿಯೋರ್ವರನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ವಾಹನವೊಂದು ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ವಾಹನ ಚಾಲಕ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮೃತ ಅಂಬುಲೆನ್ಸ್ ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸಾರ ಅಂಬ್ಯುಲೆನ್ಸ್ ವಾಹನ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ರಸ್ತೆ ಮಧ್ಯ ಪಲ್ಟಿಯಾಗಿದ್ದು, ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದ, ಈತನ ಸಹಿತ ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅಂಬುಲೆನ್ಸ್ ಚಾಲಕ ಚಿಕಿತ್ಸೆ ಗೆ ಸ್ಪಂದಿಸಿದೆ ಮೃತ ಪಟ್ಟ ಬಗ್ಗೆ ಆಸ್ಪತ್ರೆಯ ಮೂಲಗಳು ಪೋಲೀಸರಿಗೆ ಮಾಹಿತಿ ನೀಡಿದೆ.
ಅಂಬ್ಯುಲೆನ್ಸ್ ವಾಹನದಲ್ಲಿದ್ದ ರೋಗಿಯ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.