ಡೈಲಿ ವಾರ್ತೆ:18 ಆಗಸ್ಟ್ 2023
ಅಕ್ಕಿ ಗೋಲ್ ಮಾಲ್, ದಾಸ್ತಾನು ಕೇಂದ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಬೇಟಿ.
ಬಂಟ್ವಾಳ : ಭಾರತೀಯ ಆಹಾರ ನಿಗಮದಿಂದ ಪಡಿತರ ಚೀಟಿದಾರರಿಗೆ ವಿತರಣೆ ಮಾಡಲು ಕಳುಹಿಸಲಾದ ಅಕ್ಕಿಯಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ದೂರು ದಾಖಲಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ತಲಪಾಡಿಯಲ್ಲಿರುವ ದಾಸ್ತಾನು ಕೇಂದ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಬೇಟಿ ನೀಡಿ ಪ್ರಕರಣದ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಅವರು ಇಲ್ಲಿನ ಗೊಡೌನ್ ನಲ್ಲಿ ಇರಿಸಲಾದ ಅಕ್ಕಿಯಲ್ಲಿ ವ್ಯತ್ಯಾಸ ಕಂಡು ಬಂದ ಅನುಮಾನದ ಮೇಲೆ ಆಹಾರ ನಿರೀಕ್ಷಕ ತನಿಖೆ ಮಾಡಿದ್ದಾರೆ. ಅ ಸಂದರ್ಭದಲ್ಲಿ ದಾಸ್ತಾನು ಇರುವ ಅಕ್ಕಿಯ ಲೆಕ್ಕಾಚಾರದಲ್ಲಿ ಸ್ವಲ್ಪ ಅನುಮಾನದ ಮೇಲೆ ರೆಕಾರ್ಡ್ ಮಾಡಿದ್ದಾರೆ. ಇದರಲ್ಲಿ ಸೊತ್ತಿನ ಮೊತ್ತ ಸ್ವಲ್ಪ ಜಾಸ್ತಿ ಕಂಡು ಬಂದ ಹಿನ್ನೆಲೆಯಲ್ಲಿ ಕೆ.ಎಸ್.ಎಪ್.ಸಿ. ಯವರ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಕೆ.ಎಸ್.ಎಪ್.ಸಿ. ಮೇಲಾಧಿಕಾರಿಗಳ ಸೂಚನೆಯಂತೆ ನಿಗಮದ ಜಿಲ್ಲಾ ಅಧಿಕಾರಿ ಪೋಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ. ದಾಸ್ತಾನು ಕೊಠಡಿಯಲ್ಲಿ ಯಾಕೆ ಈ ತರಹದ ವ್ಯತ್ಯಾಸ ಆಗಿದೆ ಎಂಬುದರ ಮೇಲೆ ಇಲ್ಲಿನ ಡಿಪೋ ಮ್ಯಾನೇಜರ್ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರಕರಣ ಕಾಣುವ ಹಿನ್ನೆಲೆಯಲ್ಲಿ ಬೇಟಿ ನೀಡಿದ್ದೇನೆ. ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದೇನೆ. ಯಾವ ರೀತಿಯಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂಬುದರ ಬಗ್ಗೆ ಸೂಕ್ತವಾದ ತನಿಖೆ ನಡೆಸಿದ ಬಳಿಕ ಸಂಪೂರ್ಣವಾದ ಚಿತ್ರಣ ಕಂಡು ಬರಬಹುದು. ಬಹಳ ದಿನಗಳ ಸಮಸ್ಯೆಗಳು ಇರಬಹುದು . ಅದಕ್ಕೆ ಬೇಕಾದ ದಾಖಲೆಗಳನ್ನು ಮಾಡಲು ತಿಳಿಸಿದ್ದೇನೆ. ಕೆ.ಎಸ್.ಎಪ್.ಸಿ.ಯ ರಾಜ್ಯಮಟ್ಟದಲ್ಲಿ ರುವ ಅಧಿಕಾರಿಗಳನ್ನು ಸ್ಥಳಕ್ಕೆ ಬೇಟಿ ನೀಡಲು ಸೂಚಿಸಿದ್ದೇನೆ. ಅವರು ಬಂದು ನೋಡಿ ವರದಿ ನೀಡುತ್ತಾರೆ ಎಂದು ತಿಳಿಸಿದ್ದಾರೆ.
ಠಾಣೆಗೆ ದೂರು.
ಸುಮಾರು 1,32,360,30 ಕೋಟಿ ಮೌಲ್ಯದ , 3892.95.450 ಕಿಂಟ್ವಾಲ್ ಅಕ್ಕಿಯ ಕೊರತೆ ದಾಸ್ತಾನು ಕೊಠಡಿಯಲ್ಲಿ ಕಂಡು ಬಂದಿದ್ದು , ಅವ್ಯವಹಾರ ನಡೆದಿರಬೇಕು ಎಂದು ನಿಗಮದ ಅಧಿಕಾರಿಗಳು ನಗರ ಪೋಲೀಸ್ ಠಾಣೆಗೆ ದೂರನ್ನು ನೀಡಿದ್ದರು.
ದೂರಿನ ಮೇರೆಗೆ ಬಂಟ್ವಾಳ ನಗರ ಠಾಣಾಧಿಕಾರಿ ರಾಮಕೃಷ್ಣ ಅಪರಾಧ ವಿಭಾಗದ ಎಸ್.ಐ. ಕಲೈಮಾರ್ ಹಾಗೂ ಸಿಬ್ಬಂದಿಗಳು ಬೇಟಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಸಾರ್ವಜನಿಕ ದೂರು ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ದೂರು
ಜಿಲ್ಲಾಧಿಕಾರಿಗೆ ದೂರು.
ದಾಸ್ತಾನು ಇರಿಸಲಾದ ಅಕ್ಕಿಯಲ್ಲಿ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ ಎಂಬ ಸಾರ್ವಜನಿಕ ದೂರುಗಳು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕೂಡಲೇ ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಅವರಿಗೆ ಪತ್ರದ ಮುಖಾಂತರ ಅವರು ಸೂಚಿಸಿದ್ದರು.