



ಡೈಲಿ ವಾರ್ತೆ:19 ಆಗಸ್ಟ್ 2023


ಎರಡು ಬೈಕ್‌ಗಳು ಮುಖಮುಖಿ ಡಿಕ್ಕಿ- ಬ್ಯಾಂಕ್ ಉದ್ಯೋಗಿ ಮೃತ್ಯು!
ಕೊಡಗು: ಎರಡು ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಬ್ಯಾಂಕ್ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದಲ್ಲಿ ಅಪಘಾತ ಸಂಭವಿಸಿದ್ದು. ಮೃತ ಪಟ್ಟ ಬ್ಯಾಂಕ್ ಉದ್ಯೋಗಿ ಅಮೃತ (24) ಎಂದು ತಿಳಿದು ಬಂದಿದೆ.
ಇವರು ಮೂಲತಃ ಕೇರಳದ ತ್ರಿಶೂರ್ ಮೂಲದವರಾಗಿದ್ದು. ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿದ್ದ ಅಮೃತಾಳನ್ನು ಮೈಸೂರು ಅಪೊಲೋ ಆಸ್ಪತ್ರೆಗೆ ಸಾಗಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಮೃತ ಮೃತಪಟ್ಟಿರುತ್ತಾರೆ.
ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.