ಡೈಲಿ ವಾರ್ತೆ:19 ಆಗಸ್ಟ್ 2023
ಆ. 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ರಾಜ್ಯ ಸರಕಾರದ ಐದು ಗ್ಯಾರಂಟಿಗಳಲ್ಲೊಂದಾದ
ಗೃಹಲಕ್ಷ್ಮಿ ಯೋಜನೆಯು ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಉದ್ಘಾಟನಾ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುವ ಹಿನ್ನಲೆಯಿಂದ ನೀಡುತ್ತಿರುವ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನೆಯ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರು ತನ್ನ ಕ್ಷೇತ್ರವಾದ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನೆಯನ್ನು ಮಾಡಲು ನಿರ್ಧರಿಸಿದ್ದರು. ಆದರೆ ಈಗ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದೆ.
ಮೈಸೂರಿಗೆ ಆ. 30 ರಂದು ರಾಹುಲ್ ಭೇಟಿ ನೀಡಲಿದ್ದು ಅಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ.
5 ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಈ ಮೂಲಕ ಚಾಲನೆ ದೊರೆಯಲಿದೆ. ಈ ಯೋಜನೆಯಿಂದಾಗಿ ಬಿಪಿಎಲ್ ಕಾರ್ಡ್ ಹೊಂದಿರುವ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ.ಜಮೆ ಆಗಲಿದೆ.