



ಡೈಲಿ ವಾರ್ತೆ:19 ಆಗಸ್ಟ್ 2023


ಮಣಿಪಾಲ:ಬಸ್ ಡಿಕ್ಕಿ ಮಹಿಳೆ ಮೃತ್ಯು
ಮಣಿಪಾಲ: ರಸ್ತೆ ದಾಟಲು ನಿಂತಿದ್ದ ಮಹಿಳೆಯೋರ್ವರಿಗೆ ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತರು ಪರ್ಕಳದ ವಸಂತಿ ನಾಯಕ್ (70) ಎಂದು ಗುರುತಿಸಲಾಗಿದೆ.
ಅವರು ಪರ್ಕಳ ದಿಂದ ಔಷಧ ತೆಗೆದುಕೊಂಡು ಆತ್ರಾಡಿ – ಮಣಿಪಾಲದಲ್ಲಿ ರಸ್ತೆ ದಾಟಲು ಡಿವೈಡರ್ ಬಳಿ ನಿಂತುಕೊಂಡಿದ್ದಾಗ ಆತ್ರಾಡಿ ಕಡೆಯಿಂದ ಮಣಿಪಾಲದ ಕಡೆಗೆ ವೇಗದಿಂದ ಬಂದ ಬಸ್, ವಸಂತಿ ನಾಯಕ್ ಅವರಿಗೆ ಡಿಕ್ಕಿ ಹೊಡೆದಿದೆ.
ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಬಿದ್ದಿದ್ದು, ತಲೆ, ಎದೆ ಹಾಗೂ ಹೊಟ್ಟೆಗೆ ತೀವ್ರ ಗಾಯವಾಗಿತ್ತು. ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.