ಡೈಲಿ ವಾರ್ತೆ:21 ಆಗಸ್ಟ್ 2023

ಭದ್ರಾವತಿ:ಕಿಡಿಗೇಡಿಗಳಿಂದ ಗಾಂಧೀಜಿ ಪ್ರತಿಮೆ ಧ್ವಂಸ.!

ಭದ್ರಾವತಿ: ಮಹಾತ್ಮ ಗಾಂಧೀಜಿಯ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ‌ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ ನಡೆದಿದೆ.

ಹೊಳೆಹೊನ್ನೂರು ಗ್ರಾಮಸ್ಥರು ಕಿಡಿಗೇಡಿಗಳ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹೊಳೆಹೊನ್ನೂರಿನ ಪ್ರಮುಖ ವೃತ್ತದಲ್ಲಿ ಗಾಂಧೀಜಿ ಪ್ರತಿಮೆಯನ್ನು 18 ವರ್ಷಗಳ ಹಿಂದೆ ನಿರ್ಮಿಸಿದ್ದು ತಡರಾತ್ರಿ ಕಿಡಿಗೇಡಿಗಳು ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.