ಡೈಲಿ ವಾರ್ತೆ:21 ಆಗಸ್ಟ್ 2023

ಸೌಜನ್ಯ ಪ್ರಕರಣಕ್ಕೆ ಪತ್ರಕರ್ತ ವಸಂತ್ ಗಿಳಿಯಾರು ಹಾಗೂ ಸಾಮಾಜಿಕ ಹೋರಾಟಗಾರ ದಿನೇಶ್ ಗಾಣಿಗ ನಾಗಬನದಲ್ಲಿ ಆಣೆ ಪ್ರಮಾಣ: ವಿಡಿಯೋ ವೈರಲ್

ಕೋಟ: ರಾಜ್ಯ ವ್ಯಾಪಿ ಪ್ರತಿಭಟನೆ ಮತ್ತು ನ್ಯಾಯಕ್ಕಾಗಿ ಕೆಲವು ಹೋರಾಟಗಳು ದಿನದಿಂದ ದಿನಕ್ಕೆ ಕಾವು ತೆಗೆದುಕೊಳ್ಳುತ್ತಿದೆ ಅದೇ ರೀತಿ ಉಡುಪಿ ಜಿಲ್ಲೆಯ ಪತ್ರಕರ್ತರೊಬ್ಬರು ಸೌಜನ್ಯ ಪ್ರಕರಣಕ್ಕೆ ಸತ್ಯಶೋಧನೆ ವರದಿ ಎನ್ನುವ ಹೆಸರಿನಲ್ಲಿ ಆರೋಪ ಪ್ರತ್ಯಾರೋಪ ನಡೆಯುತ್ತಿದೆ.

ಆಣೆ ಪ್ರಮಾಣದ ವಿಡಿಯೋ

ದ.ಕ. ಜಿಲ್ಲೆಯ ಧರ್ಮಸ್ಥಳ ಪರಿಸರದಲ್ಲಿ ದಶಕದ ಹಿಂದೆ ನಡೆದಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ನ್ಯಾಯ ಸಿಗಲಿಲ್ಲ ಎಂದು ಹನ್ನೊಂದು ವರ್ಷಗಳ ಬಳಿಕ ಇತ್ತೀಚೆಗೆ ಕೆಲವು ದಿನಗಳಿಂದ ಮತ್ತೆ ಈ ಪ್ರಕರಣ ಮುನ್ನೆಲೆಗೆ ಬಂದಿದೆ.

ಮಹೇಶ್ ಶೆಟ್ಟಿ ತಿಮರೋಡಿ ಅವರು ಸುಳ್ಳನ್ನ ಹೆಚ್ಚು ಹೇಳುತ್ತಿದ್ದಾರೆ ಇದರಿಂದ ಸೌಜನ್ಯ ಕುಟುಂಬಕ್ಕೆ ಯಾವುದೇ ರೀತಿಯ ನ್ಯಾಯ ಸಿಗುವುದಿಲ್ಲ ಅದಲ್ಲದೆ ಮಹೇಶ್ ಶೆಟ್ಟಿ ತಿಮ್ಮರೋಡಿ ಅವರು ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ ಅದು ಈ ಸಮಾಜ ಒಪ್ಪುವುದಲ್ಲ ಅದಕ್ಕಾಗಿ ನನ್ನ ಹೋರಾಟ ಸೌಜನ್ಯ ಕುಟುಂಬಕ್ಕಾಗಿ ಎನ್ನುವುದು ಪತ್ರಕರ್ತ ವಸಂತ ಅಭಿಮತ ಅವರದ್ದಾಗಿದೆ. ಆದರೆ ಹಾಯ್ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಸೌಜನ್ಯ ಪ್ರಕರಣಕ್ಕೆ 5 ಲಕ್ಷ ಹಣವನ್ನು ಪಡೆದಿದ್ದಾರೆ ಎನ್ನುವುದು ಸಾಮಾಜಿಕ ಹೋರಾಟಗಾರ ದಿನೇಶ್ ಗಾಣಿಗ ಆರೋಪಗಳನ್ನ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗಿರುವುದರಿಂದ ಇದಕ್ಕೆ ಸಂಬಂಧಪಟ್ಟಂತೆ ವಸಂತ ಗಿಳಿಯಾರ್ ನಾಗಬನದಲ್ಲಿ ಆಣೆ ಪ್ರಮಾಣ ಮಾಡಲು ಸಿದ್ಧ ಎಂದು ಒಪ್ಪಿಕೊಂಡು ಆಣೆ ಪ್ರಮಾಣಕ್ಕೆ ಮುಂದಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರವನ್ನು ಎಳೆದು ತರುವುದು ತಪ್ಪು ಎಂದು ವೀರೇಂದ್ರ ಹೆಗ್ಗಡೆರೂ ಸ್ವಸಹಾಯ ಸಂಘದ ಸದಸ್ಯರನ್ನು ಕರೆಸಿ, ಬೃಹತ್ ರ್‍ಯಾಲಿಯನ್ನು ಮಾಡಿದ್ದರು. ಧರ್ಮಸ್ಥಳದ ಹೆಸರನ್ನು ಹಾಗೂ ಹೆಗ್ಗಡೆಯವರ ಹೆಸರನ್ನ ಎಳೆದು ತಂದು ಇದರಲ್ಲೂ ವಿಷ ಬೀಜ ಬಿತ್ತುತ್ತಾರೆ ಎಂದು ತಿಮ್ಮ ರೋಡಿಯ ವಿರುದ್ಧ ಪ್ರತಿಭಟನಾಕಾರರು ಗುಡುಗಿದ್ದರು.
ಇತ್ತೀಚಿಗೆ ಧರ್ಮಸ್ಥಳದಲ್ಲಿ ನಡೆದ ರ್‍ಯಾಲಿಯಲ್ಲಿ ಸೌಜನ್ಯಳ ಸಹೋದರನ ಕುತ್ತಿಗೆ ಪಟ್ಟಿಗೆ ಕೈಹಾಕಿ ರೌಡಿಸಂ ತೋರಿಸಿದ್ದಾರೆ ಅದಲ್ಲದೆ ಸೌಜನ್ಯ ಕುಟುಂಬವನ್ನು ಅವಮಾನ ಮಾಡಿದ್ದಾರೆ ಎಂದು ಕುಟುಂಬದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ವೈರಲ್ ಆಗಿತ್ತು.

ನಾವು ಸೌಜನ್ಯಾ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವ ಸಲುವಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹಲವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನೆ ನಡೆಸುತ್ತಿರುವುದಾಗಿ ಉಡುಪಿ ಜಿಲ್ಲೆಯ ಪತ್ರಕರ್ತ ವಸಂತ್ ಗಿಳಿಯಾರ್ ಎನ್ನುವವರು, ದಕ್ಷಿಣಕನ್ನಡ ಜಿಲ್ಲೆಯ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಎನ್ನುವವರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದಾರೆ.

ಈ ಮಧ್ಯೆ ಉಡುಪಿ ಜಿಲ್ಲೆಯ ಸಾಮಾಜಿಕ ಹೋರಾಟಗಾರ ದಿನೇಶ್ ಗಾಣಿಗರವರು ಪತ್ರಕರ್ತ ವಸಂತ್ ಗಿಳಿಯಾರ್ ವಿರುದ್ಧ ಆರೋಪ ಮಾಡಿದ್ದು. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪತ್ರಿಕೆಯಲ್ಲಿ 2016ರಲ್ಲಿ ವಸಂತ್ ಗಿಳಿಯಾರ್ ಐದು ಲಕ್ಷ ರೂ. ಪಡೆದಿದ್ದರು. ಅಲ್ಲದೆ ಆ ವರದಿ ಇದ್ದ ಪತ್ರಿಕೆ ಇನ್ನೊಬ್ಬರಿಗೆ ತಲುಪಿಸಿದ್ದೂ ಗೊತ್ತು ಎಂದು ದಿನೇಶ್ ಗಾಣಿಗ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಬ್ಬರ ಮಧ್ಯೆ ನಡೆದ ಸಂಘರ್ಷ ಇದೀಗ ಆಣೆ-ಪ್ರಮಾಣದ ಹಂತಕ್ಕೆ ತಲುಪಿದೆ. ಉಡುಪಿ ಜಿಲ್ಲೆಯ ಕೋಟತಟ್ಟು ಪಡುಕೆರೆ ನಾಗಬನ ಹಾಗೂ ಯಕ್ಷಿ ಸನ್ನಿಧಾನದಲ್ಲಿ ಇವರಿಬ್ಬರು ತೆಂಗಿನಕಾಯಿ ಮುಟ್ಟಿ ಪ್ರಮಾಣ ಮಾಡಿದ್ದು, ಇಬ್ಬರಲ್ಲಿ ಯಾರು ಸರಿ ಎಂದು ದೇವರೇ ತೋರಿಸಲಿ ಎಂದು ಕೇಳಿಕೊಂಡಿದ್ದಾರೆ. ಇಬ್ಬರು ಆಣೆ ಪ್ರಮಾಣವನ್ನು ಮಾಡಿದ್ದಾರೆ.