ಡೈಲಿ ವಾರ್ತೆ:22 ಆಗಸ್ಟ್ 2023
ದಕ್ಷಿಣ ಕನ್ನಡ: ಅನ್ಯಕೋಮಿನ ವ್ಯಕ್ತಿಗೆ ತಲವಾರು ದಾಳಿ ಪ್ರಕರಣ – ಪೊಲೀಸರ ಕ್ಷೀಪ್ರ ಕಾರ್ಯಾಚರಣೆ 24 ಗಂಟೆಯಲ್ಲಿ ಮೂವರು ಆರೋಪಿಗಳ ಬಂಧನ
ಮಂಗಳೂರು:ಅನ್ಯಕೋಮಿನ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿದ ಆರೋಪಿಗಳನ್ನು 24 ಗಂಟೆಯಲ್ಲಿ ಕಾವೂರು ಪೊಲೀಸರು
ಕ್ಷೀಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.
ಚರಣ್ ರಾಜ್ ( 23), ಸುಮಂತ್ ಬರ್ಮನ್ (24), ಅವಿನಾಶ (24) ಬಂಧಿತ ಆರೋಪಿಗಳಾಗಿದ್ದು
ಇವರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್.ವಿ.ಶೆಟ್ಟಿ ಕಾಲೇಜು ರೋಡ್ ಬಳಿ ವ್ಯಕ್ತಿಯೊಬ್ಬರು ನಡೆದುಕೊಂಡು ಮನೆಗೆ ಹೋಗುತ್ತಿರುವಾಗ ಉರುಂದಾಡಿ ಗುಡ್ಡೆಯ ಚರಣ್, ಸುಮಂತ್ ಬರ್ಮನ್ ಹಾಗೂ ಕೋಡಿಕಲ್ ನ ಅವಿನಾಶ್ ಎಂಬವರು ಸ್ಕೂಟಿಯಲ್ಲಿ ಬಂದು ಅಡ್ಡಹಾಕಿ ತಡೆದು ತಲವಾರು ಬಿಸಿರುತ್ತಾರೆ ಅದೃಷ್ಟವರ ಅನ್ಯ ಕೋಮಿನ ವ್ಯಕ್ತಿಯು ತಪ್ಪಿಸಿಕೊಂಡಿದ್ದಾರೆ. ಆದರೆ ಮುಖಕ್ಕೆ ಗಾಯವಾಗಿರುತ್ತದೆ.
ಇನ್ನು ಕಾವೂರು ಪೊಲೀಸರು ಕಾರ್ಯಪ್ರವತ್ತರಾಗಿ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.