



ಡೈಲಿ ವಾರ್ತೆ:22 ಆಗಸ್ಟ್ 2023


ಪಡಿತರ ಚೀಟಿ ತಿದ್ದುಪಡಿ ಅರ್ಜಿ ಸಲ್ಲಿಕೆಗೆ ಸೆ.01 ರಿಂದ ಹತ್ತು ದಿನದ ಅವಕಾಶ
ಮಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ನೀಡಿದ್ದ ಕಾಲಾವಕಾಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದ್ದು, ಸೆಪ್ಟೆಂಬರ್ 1ರಿಂದ 10ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಆಗಸ್ಟ್ 21ರಂದು ಕೊನೆಯ ದಿನವಾಗಿತ್ತು. ಆದರೆ ಹಲವೆಡೆ ಸರ್ವರ್ ಸಮಸ್ಯೆಯ ಕಾರಣದಿಂದ ತುಂಬಾ ಜನರು ತಿದ್ದುಪಡಿ ಅರ್ಜಿ ಸಲ್ಲಿಕೆ ಮಾಡಲಾಗದೆ ಬರಿಗೈಯಲ್ಲಿ ಮನೆಗೆ ಮರಳಿದ್ದರು. ಹೀಗಾಗಿ ಮತ್ತೆ ಅವಕಾಶ ಕೊಡಲು ಆಗ್ರಹಿಸಿದ್ದರು. ಹೀಗಾಗಿ ಆ.23 (ಬುಧವಾರ) ಒಂದು ದಿನ ಮತ್ತೆ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆ.25 ರಂದು ತುರ್ತು ಚಿಕಿತ್ಸೆಗಾಗಿ ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಸೇರಿಸಿದ ಅರ್ಜಿಗಳ ವಿಲೇವಾರಿ ಆಹಾರ ನೀರಿಕ್ಷಕರು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಇದೀಗ ಸೆ.01 ರಿಂದ ಸೆ.10 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ತನಕ ಅವಕಾಶ ಕಲ್ಪಿಸಲಾಗಿದೆ.