ಡೈಲಿ ವಾರ್ತೆ:25 ಆಗಸ್ಟ್ 2023

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ವಿವಿಧ ಬೇಡಿಕೆ ಮತ್ತು ಸಮಸ್ಯೆಗಳನ್ನು ಈಡೇರಿಸುವಂತೆ ರಾಜ್ಯ ಉಪ ಮುಖ್ಯಮಂತ್ರಿ ಅವರಿಗೆ ಮನವಿ.

ಬಂಟ್ವಾಳ : ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ವಿವಿಧ ಬೇಡಿಕೆ ಮತ್ತು ಸಮಸ್ಯೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಉಪ ಮುಖ್ಯಮಂತ್ರಿ ಅವರಿಗೆ ಸಂಘದ ವತಿಯಿಂದ ಸಹಾಯಕ ಆಯುಕ್ತರ ಮೂಲಕ ಮನವಿ ಸಲ್ಲಿಸಲಾಯಿತು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಡಿಮೆ ಸಂಬಳ ಹಾಗೂ ಸೇವಾ ಭದ್ರತೆಯಿಲ್ಲದೆ ಕೆಲಸ ಮಾಡುವ ಅತಿಥಿ ಶಿಕ್ಷಕರ ವಿವಿಧ ಬೇಡಿಕೆ ಮತ್ತು ಸಮಸ್ಯೆಗಳನ್ನು ಈಡೇರಿಸುವಂತೆ ಹಿಂದೆಯೂ ಸರ್ಕಾರದ ಗಮನಕ್ಕೆ ತರಲಾಗಿದೆ ಆದರೆ ಭರವಸೆ ಸಿಕ್ಕಿದೆ ವಿನಃ ಯಾವುದೇ ಪ್ರಯೋಜನವಾಗಿಲ್ಲ. ಸರಕಾರ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದಲ್ಲಿ ರಾಜ್ಯದೆಲ್ಲೆಡೆ ಶಾಲೆ ತೊರೆಯೋಣ ಅಭಿಯಾನ ನಡೆಸಲಿದ್ದೇವೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಬಂಟ್ವಾಳ ಶಾಸಕರು, ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೂ ಮನವಿ ಸಲ್ಲಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷೆ ಚಿತ್ರಲೇಖಾ, ತಾಲೂಕು ಅಧ್ಯಕ್ಷೆ ಅಮಿತಾ, ಕಾರ್ಯದರ್ಶಿ ಬಬಿತಾ, ಸದಸ್ಯರಾದ ನವ್ಯಶ್ರೀ, ವಸಂತಿ ಉಪಸ್ಥಿತರಿದ್ದರು.