



ಡೈಲಿ ವಾರ್ತೆ:30 ಆಗಸ್ಟ್ 2023


ಮಡಿಕೇರಿ: ಅರಣ್ಯ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ
ಮಡಿಕೇರಿ : ಕೊಡಗಿನಲ್ಲಿ ಯುವ ಅರಣ್ಯಾಧಿಕಾರಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಮಡಿಕೇರಿಯ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ಈ ಘಟನೆ ನಡೆದಿದೆ. ಮಂಡ್ಯ ಮೂಲದ ರಶ್ಮಿ(27) ಮೃತ ದುರ್ದೈವಿ. ಅರಣ್ಯ ಇಲಾಖೆಯಲ್ಲಿ DRFO ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ ಕೊಡಗು ಜಿಲ್ಲೆ ಮಡಿಕೇರಿಯ ಅರಣ್ಯ ಭವನ ಬಳಿ ಇರುವ ವಸತಿ ಗೃಹದಲ್ಲಿ ತಂಗಿದ್ದರು. ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.