ಡೈಲಿ ವಾರ್ತೆ:30 ಆಗಸ್ಟ್ 2023

ಕೋಟ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಹದಿಹರೆಯದವರಿಗೆ ಮಾಹಿತಿ ಕಾರ್ಯಾಗಾರ

ಕೋಟ: ಸಂಘಸಂಸ್ಥೆಗಳು ಸಮಾಜಮುಖಿ ಕಾರ್ಯಗಳ ಜತೆಗೆ ಪ್ರಸ್ತುತ ಯುವ ಸಮುದಾಯಗಳ ಕಳಕಳಿ ಅಗತ್ಯವಾಗಿದೆ ಎಂದು ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಹೇಳಿದರು.

ಸರಕಾರಿ ಪ್ರೌಢಶಾಲೆ ಗುಂಡ್ಮಿ ಇಲ್ಲಿ ಕೋಟದ ಪಂಚವರ್ಣ ಮಹಿಳಾ ಮಂಡದ ನೇತ್ರತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಹಭಾಗಿತ್ವದಲ್ಲಿ ಹದಿಹರೆಯದವರ ಕುರಿತು ಅರಿವು ನಿಮಗಿರಲಿ ನೆರವು 7ನೇ ಮಾಲಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪಂಚವರ್ಣ ಸಂಸ್ಥೆ ಹಲವಾರು ಸಾಮಾಜಿಕ ಕಾರ್ಯಗಳ ಜತೆಗೆ ಹಲವಾರು ಮಾಹಿತಿ ನೀಡುವ ಕಾರ್ಯಕ್ರಮಗಳು ಈ ವ್ಯವಸ್ಥೆ ಪೂರಕವಾಗಿದೆ ಇದರ ಸದ್ವಿನಿಯೋಗ ಪ್ರತಿಯೊಬ್ಬರು ಪಡೆಯಬೇಕು ಆ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡುವ ಕಾರ್ಯಗಳಾಗಲಿ ಎಂದು ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದ ತೆಕ್ಕಟ್ಟೆ ಪರಿರದ ಪ್ರಸಿದ್ಧ ಸ್ತ್ರೀ ರೋಗ ತಜ್ಞೆ ವೈದ್ಯೆ ಡಾ.ಸುಮಂಗಲ ಮಾತನಾಡಿ ಆಧುನಿಕ ಕಾಲಘಟ್ಟದಲ್ಲಿ ನಾವಿದ್ದೇವೆ ನಮ್ಮ ಆಹಾರ ,ನಮ್ಮ ಜೀವನ ಕ್ರಮ,ಮೊಬೈಲ್ ವ್ಯಾಮೂಹ,ಜಂಕ್ ಪುಡ್ ಸೇವನೆಯಿಂದ ಆರೋಗ್ಯ ಸಮಸ್ಯೆ,ಹೆಣ್ಣು ಮಕ್ಕಳಲ್ಲಿಎದುರಾಗುವ ಹದಿಹರೆಯದ ಸಮಸ್ಯೆಗಳು ಅದರ ಪರಿಹಾರ ಕ್ರಮಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.
ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್ ವಹಿಸಿ ಪ್ರಾಸ್ತಾವನೆ ಸಲ್ಲಿಸಿದರು.
ಮುಖ್ಯ ಅಭ್ಯಾಗತರಾಗಿ ನಿವೃತ್ತ ಮುಖ್ಯ ಶಿಕ್ಷಕ ಗಣೇಶ್ ಜಿ,ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷ ಅರವಿಂದ ಶರ್ಮ,ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ರವೀಂದ್ರ ಜೋಗಿ,ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ರಾಘವೇಂದ್ರ,ಶಿಕ್ಷಕ ವೃಂದ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಸತೀಶ್ ಐತಾಳ್ ಸ್ವಾಗತಿಸಿದರು.ಕಾರ್ಯಕ್ರಮವನ್ನು ಮಹಿಳಾ ಮಂಡಲದ ಉಪಾಧ್ಯಕ್ಷೆ ವಸಂತಿ ಹಂದಟ್ಟು ನಿರೂಪಿಸಿದರು. ಕಾರ್ಯದರ್ಶಿ ಲಲಿತಾ ಪೂಜಾರಿ ವಂದಿಸಿದರು. ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.ಶಶಿಧರ ತಿಂಗಳಾಯ ಸಹಕರಿಸಿದರು.

ಸರಕಾರಿ ಪ್ರೌಢಶಾಲೆ ಗುಂಡ್ಮಿ ಇಲ್ಲಿ ಕೋಟದ ಪಂಚವರ್ಣ ಮಹಿಳಾ ಮಂಡದ ನೇತ್ರತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಹಭಾಗಿತ್ವದಲ್ಲಿ ಹದಿಹರೆಯದವರ ಕುರಿತು ಅರಿವು ನಿಮಗಿರಲಿ ನೆರವು 7ನೇ ಮಾಲಿಕೆ ಕಾರ್ಯಕ್ರಮವನ್ನು ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಉದ್ಘಾಟಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಗಣೇಶ್ ಜಿ,ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷ ಅರವಿಂದ ಶರ್ಮ,ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ರವೀಂದ್ರ ಜೋಗಿ ಇದ್ದರು.