ಡೈಲಿ ವಾರ್ತೆ:31 ಆಗಸ್ಟ್ 2023

ಕುಂದಾಪುರ: 10ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಕುಂದಾಪುರ:ಎಸ್ಎಸ್ ಎಲ್ ಸಿ ವಿದ್ಯಾರ್ಥಿನಿನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಕೋಣೆ ಎಂಬಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ಪಡುಕೋಣೆ ನಿವಾಸಿಯ ಪ್ರಶಾಂತ್ ಹಾಗೂ ಸುನಂದಾ ದಂಪತಿಗಳ ಪುತ್ರಿ ಸಿಂಧು (16) ಎಂದು ತಿಳಿದುಬಂದಿದೆ.

ಇವರು ಕುಂದಾಪುರದ ವಡೇರಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು, ಸಮೀಪದ ಸರಕಾರಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು
ಕಳೆದೆರಡು ದಿನಗಳ ಹಿಂದೆ ಅನಾರೋಗ್ಯವೆಂದು ತನ್ನ ಮನೆಗೆ ಬಂದಿದ್ದ ಸಿಂಧುವನ್ನು ಬುಧವಾರ ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಗುರುವಾರ ಶಾಲೆಗೆ ಬರಬೇಕಿದ್ದರಿಂದ ತಂದೆ ಕುಂದಾಪುರಕ್ಕೆ ಬಿಡುವುದಾಗಿ ಹೇಳಿದ್ದರು. ಆದರೆ ಆಕೆ ತಾನು ಬಸ್ಸಿನಲ್ಲಿ ಹೋಗುವುದಾಗಿ ತಿಳಿಸಿದ್ದಳು. ಇದಾದ ಸ್ವಲ್ಪ ಸಮಯದ ನಂತರ ಮನೆಯವರು ಗಮನಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಸಿಂಧು ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ಹರೀಶ್ ಆರ್.ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.