ಡೈಲಿ ವಾರ್ತೆ:02 ಸೆಪ್ಟೆಂಬರ್ 2023

ಆದಿತ್ಯ ಎಲ್-1 ಯಶಸ್ವಿ ಉಡಾವಣೆ – ಇಸ್ರೋ ವಿಜ್ಞಾನಿಗಳಿಗೆ ಮೋದಿ ಅಭಿನಂದನೆ

ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ಇಸ್ರೋ (ISRO) ಮತ್ತೊಂದು ಮಹತ್ತರವಾದ ಸಾಧನೆ ಮಾಡಿದ್ದು, ಸೂರ್ಯನ ಅಧ್ಯನಕ್ಕಾಗಿ ಆದಿತ್ಯ ಎಲ್-1 ಮಿಷನ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಇಸ್ರೋ ಸಂಸ್ಥೆ ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಎಲ್-1 ಮಿಷನ್ ಅನ್ನು ಶನಿವಾರ ಬೆಳಗ್ಗೆ 11.50ಕ್ಕೆ ಶ್ರೀ ಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಉಡಾವಣೆ ಮಾಡಿತು. ಇಸ್ರೋ ವಿಜ್ಞಾನಿಗಳ ಈ ಅಭೂತಪೂರ್ವ ಸಾಧನೆಗಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.