


ಡೈಲಿ ವಾರ್ತೆ:05 ಸೆಪ್ಟೆಂಬರ್ 2023


ಮಲ್ಪೆ: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣು ಬಿಗಿದು ಆತ್ಮಹತ್ಯೆ
ಉಡುಪಿ: ಮಲ್ಪೆ ಸಮೀಪದ ಶಾಂತಿನಗರದಲ್ಲಿ ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮ ಹತ್ಯೆಗೆ ಶರಣಾದ ಯುವಕ ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಎಂದು ತಿಳಿದು ಬಂದಿದೆ.
ವಿರಾಜ್ ಅವರು ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ.
ಇಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಮಲ್ಪೆ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.