ಡೈಲಿ ವಾರ್ತೆ: 13/09/2023

ಉದ್ಯಮಿಯೊಬ್ಬರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂ. ವಂಚನೆ – ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ.!

ಉಡುಪಿ: ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉದ್ಯಮಿಯೊಬ್ಬರಿಗೆ MLA ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಚೈತ್ರಾ ಕುಂದಾಪುರ ವಿರುದ್ಧ ಕೇಳಿ ಬಂದಿದೆ.

ಬೆಂಗಳೂರು ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಸಿನಿಮೀಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ನಾಯಕ್ ಪೆಲತ್ತೂರು ಎಂಬುವರನ್ನು ವಶಕ್ಕೆ ಪಡೆಯಲಾಗಿದೆ.

ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವರು ದೂರು ನೀಡಿದ್ದರು. ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕ ಗೋವಿಂದ ಬಾಬು ಚೈತ್ರಾ ವಿರುದ್ಧ ಆರೋಪಿಸಿದ್ದಾರೆ. ಉದ್ಯಮಿಯ ಮುಗ್ಧತೆಯನ್ನು ಬಳಸಿಕೊಂಡು ಮಹಾವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಬೈಂದೂರು ಬಿಜೆಪಿಯ ಟಿಕೆಟ್ ಪಕ್ಕಾ ಮಾಡಿಕೊಡುವುದಾಗಿ ನಂಬಿಸಿ ವಂಚನೆ ಮಾಡಲಾಗಿದ್ದು, ವಂಚನೆ ಪ್ರಕರಣದಲ್ಲಿ ಈವರೆಗೆ ಒಟ್ಟು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.