



ಡೈಲಿ ವಾರ್ತೆ: 13/09/2023


ಅಮ್ಟಾಡಿ ಗ್ರಾ.ಪಂ.ಕಾರ್ಯದರ್ಶಿ ನಾಪತ್ತೆ- ಮೊಬೈಲ್ ಶಿರ್ತಾಡಿಯಲ್ಲಿ ಪತ್ತೆ!
ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾ.ಪಂ.ನ ಕಾರ್ಯದರ್ಶಿಯವರು ಅನಾರೋಗ್ಯಕ್ಕಾಗಿ ಔಷಧಿಗೆಂದು ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದು, ಇದೀಗ ಅವರ ಮೊಬೈಲ್ ಪೋನ್ ಶಿರ್ತಾಡಿಯಲ್ಲಿ ಪತ್ತೆಯಾಗಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಮಡಂತ್ಯಾರು ನಿವಾಸಿ ಲಕ್ಷ್ಮೀನಾರಾಯಣ ನಾಪತ್ತೆಯಾದ ವ್ಯಕ್ತಿಯಾಗಿದ್ದು, ನಾಪತ್ತೆಯ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅವರ ಮೊಬೈಲ್ ಶಿರ್ತಾಡಿ ಭಾಗದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾ.ಪಂ.ನ ತಂಡ ಅದೇ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದು, ಯಾವುದೇ ಸುಳಿವು ಪತ್ತೆಯಾಗಿಲ್ಲ ಎನ್ನಲಾಗಿದೆ.
ಅವರ ನಾಪತ್ತೆಯ ಕುರಿತು ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಅವರು ಬೈಕಿನಲ್ಲಿ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.