ಡೈಲಿ ವಾರ್ತೆ:15 ಸೆಪ್ಟೆಂಬರ್ 2023
ಮಲ್ಪೆ: ತೊಟ್ಟಂನಲ್ಲಿ ಗ್ರಾನೈಟ್ ಬಿದ್ದು ಸಾವನ್ನಪ್ಪಿದ್ದ ಕಾರ್ಮಿಕರಿಬ್ಬರ ಕುಟುಂಬಕ್ಕೆ ಪರಿಹಾರ ನೀಡಲು SDTU ಆಗ್ರಹ!
ಉಡುಪಿ, : ಮಲ್ಪೆಯ ತೊಟ್ಟಂ ನಲ್ಲಿ ಕಂಟೈನರ್ ನಿಂದ ಗ್ರಾನೈಟ್ ಇಳಿಸುವಾಗ ಆಕಸ್ಮಿಕ ಕಾರ್ಮಿಕರಿಬ್ಬರ ಮೇಲೆ ಬಿದ್ದು ಒರಿಸ್ಸಾದ ಇಬ್ಬರು ದಾರುಣವಾಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಈ ದುರ್ಘಟನೆಗೆ SDTU ಉಡುಪಿ ಜಿಲ್ಲೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸುತ್ತಿದೆ.
ಕುಟುಂಬದ ಜೀವನ ನಿರ್ವಹಣೆಗಾಗಿ ಜವಾಬ್ದಾರಿಯನ್ನು ಹೊತ್ತು ಹೊರರಾಜ್ಯದಿಂದ ಕೆಲಸವನ್ನು ಹರಸಿ ಬರುವ ಕಾರ್ಮಿಕರು ಸೂಕ್ತ ಸುರಕ್ಷಾ ಕ್ರಮ ಇಲ್ಲದೆ ವಿವಿಧ ಅಪಾಯಗಳನ್ನು ಎದುರಿಸುತ್ತಿದ್ದಾರೆ. ದುಡಿಸುವವರು ಅನುಕೂಲಕ್ಕೆ ತಕ್ಕ ಹೊರರಾಜ್ಯದ ಕಾರ್ಮಿಕರನ್ನು ಯಾವುದೇ ಸುರಕ್ಷಾ ಕ್ರಮ ವಹಿಸದೆ ಕಾರ್ಮಿಕರನ್ನು ವಿವಿಧ ರೀತಿಯಲ್ಲಿ ಬಳಸುತ್ತಿರುವ ಕಾರಣದಿಂದ ಸಾವು ನೋವುಗಳು ಸಂಭವಿಸುವ ಘಟನೆಗಳು ನಡೆಯುತ್ತಿದೆ. ಕಾರ್ಮಿಕರ ಶ್ರಮವನ್ನು ನಮ್ಮ ಅನುಕೂಲಕ್ಕೆ ತಕ್ಕ ಬಳಸುವಾಗ ಅವರ ಕ್ಷೇಮಭಿವೃದ್ಧಿ ಮತ್ತು ಸುರಕ್ಷತೆಯನ್ನು ಖಾತ್ರಿ ಪಡಿಸುವೂದಕ್ಕಾಗಿ ಅಧಿಕೃತರು ವಿಶೇಷ ಕ್ರಮ ವಹಿಸಬೇಕು ಮಾತ್ರವಲ್ಲ ದುಡಿಮೆಗಾಗಿ ಹೊರ ರಾಜ್ಯದಿಂದ ಬರುವ ಹೊರರಾಜ್ಯಕ್ಕೆ ತೆರಳುವ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಸರಕಾರ ವಿಶೇಷ ಕ್ರಮವಹಿಸಲು ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಉಡುಪಿ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಉಚ್ಚಿಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.