ಡೈಲಿ ವಾರ್ತೆ:16 ಸೆಪ್ಟೆಂಬರ್ 2023
ಮಂಗಳೂರು:ಅಲ್ಪಕಾಲದ ಅನಾರೋಗ್ಯದಿಂದ ವಿದ್ಯಾರ್ಥಿ ಬಲಿ
ಮಂಗಳೂರು: ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಜಳ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಎಚ್.ಮುಹಮ್ಮದ್ ಶಹದ್(12) ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ನಿಧನರಾದರು.
ದೇರಳಕಟ್ಟೆ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಅಂಗವಿಕಲನಾಗಿದ್ದ. ವೀಲ್ ಚೇರ್ ಮೂಲಕ ಶಾಲೆಗೆ ಹಾಜರಾಗಿ ಶಿಕ್ಷಣ ಪಡೆಯುತ್ತಿದ್ದ ಶಹದ್ ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೀಡಾಗಿದ್ದ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಶಹದ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾನೆ. ಮೃತ ವಿದ್ಯಾರ್ಥಿ ತಂದೆ, ತಾಯಿ, ಇಬ್ಬರು ಸಹೋದರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾನೆ.