ಡೈಲಿ ವಾರ್ತೆ: 18/09/2023

ಮಂಗಳೂರು:ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ: ಯುವತಿ ಮೃತ್ಯು

ಮಂಗಳೂರು: ಆಟೋರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರಣ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ.

ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಮೃತ ಯುವತಿ ಎಂದು ಗುರುತಿಸಲಾಗಿದೆ.
ಇನ್ನು ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.