ಡೈಲಿ ವಾರ್ತೆ: 19/09/2023

ಬಳ್ಕೂರು: ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ – ಸ್ಕೂಟಿ ಸವಾರರಿಬ್ಬರು ಗಂಭೀರ ಗಾಯ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಳ್ಕೂರುಲ್ಲಿ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಸ್ಕೂಟಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಕುಂದಾಪುರ ಕಡೆಯಿಂದ ಕಂಡ್ಲೂರು ಕಡೆಗೆ ಹೋಗುತ್ತಿದ್ದ ಕಾರು ಕಂಡ್ಲೂರುಯಿಂದ ಕುಂದಾಪುರ ಕಡೆಗೆ ಹೋಗುವ ಸ್ಕೂಟಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಹಾಗೂ ಸಹಸವಾರ ಗಂಭೀರ ಗಾಯಗೊಂಡಿರುತ್ತಾರೆ. ಸ್ಥಳೀಯರು ತಕ್ಷಣ ಅವರನ್ನು ಕೆಎಂಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿರುತ್ತಾರೆ ಎಂದು ತಿಳಿದು ಬಂದಿದೆ.
ಕಂಡ್ಲೂರು ಪೊಲೀಸ್ ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.