ಡೈಲಿ ವಾರ್ತೆ:22 ಸೆಪ್ಟೆಂಬರ್ 2023
ಕೋಟ ಗ್ರಾ. ಪಂ. ವತಿಯಿಂದ ಪೌಷ್ಟಿಕ ಆಹಾರದ ಕಿಟ್ ನ್ನು ಕ್ಷಯ ರೋಗಿಗಳಿಗೆ ಹಸ್ತಾಂತರ
ಕೋಟ: ಕೋಟ ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡಿದ ಪೌಷ್ಟಿಕ ಆಹಾರದ ಕಿಟ್ ನ್ನು ಸಮುದಾಯ ಆರೋಗ್ಯ ಕೇಂದ್ರ ಕೋಟದಲ್ಲಿ ಕ್ಷಯ ರೋಗಿಗಳಿಗೆ ಹಸ್ತಾಂತರಿಸಲಾಯಿತು.
ಆಯುಷ್ಮಾನ್ ಭವ ಕಾರ್ಯಕ್ರಮದ ಅಡಿಯಲ್ಲಿ ನಡೆದ ಈ ಸಮಾರಂಭಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಸತೀಶ್ ವಡ್ಡರ್ಸೆ, ಲೆಕ್ಕ ಸಹಾಯಕ ಶೇಖರ್ ಮರವಂತೆ , ಕೋಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾಕ್ಟರ್ ಮಾಧವ ಪೈ ಸೇರಿದಂತೆ ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು, ಹಾಜರಿದ್ದರು. ಹಿರಿಯ ಮೇಲ್ವಿಚಾರಕ ಮಂಜುನಾಥ್ ಕಾರ್ಯಕ್ರಮದ ನಿರೂಪಣೆಗೈದರು.
ಈ ಸಂದರ್ಭದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಬಗ್ಗೆ ಗ್ರಾಮ ಪಂಚಾಯತ್ ನ ಪಾತ್ರ ಹಾಗೂ ಆರೋಗ್ಯ ಇಲಾಖೆಯ ಕಾರ್ಯವೈಖರಿ ಕುರಿತ ಮಾಹಿತಿ ಯನ್ನು ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ನೀಡಿದರು.