ಡೈಲಿ ವಾರ್ತೆ: 23/Sep/2023

ಬಂಟ್ವಾಳ: ಕಾರು ಹಾಗೂ ಆಟೋರಿಕ್ಷಾ ನಡುವೆ ಅಪಘಾತ – ರಿಕ್ಷಾ ಚಾಲಕನ ಮೃತ್ಯು

ಬಂಟ್ವಾಳ : ಕಾರು ಮತ್ತು ರಿಕ್ಷಾ ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಶನಿವಾರ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾಗಿದ್ದು ಕೆಂಪು ಗುಡ್ಡೆ ನಿವಾಸಿ ವಿನಾಯಕ ಪೈ ಅಪಘಾತದಿಂದ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡ ವಿನಾಯಕ ಪೈ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆ ಸಾಗಿಸುವ ದಾರಿ ಮಧ್ಯದಲ್ಲಿ ಅವರು ಅಸುನೀಗಿದ್ದಾರೆ ಎನ್ನಲಾಗಿದೆ. ಬಂಟ್ವಾಳ ಸಂಚಾರಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು,ಪ್ರಕರಣ ದಾಖಲಿಸಿಕೊಂಡಿದ್ದಾರೆ.