ಡೈಲಿ ವಾರ್ತೆ:24 ಸೆಪ್ಟೆಂಬರ್ 2023

ಪಾಟ್ರಕೋಡಿ: ಹೃದಯ ಸಂಬಂಧಿ ಕಾಯಿಲೆಯಿಂದ 4 ವರ್ಷದ ಬಾಲಕಿ ಮೃತ್ಯು!

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಸೆ.24ರ ಭಾನುವಾರ ಮೃತಪಟ್ಟಿದ್ದಾಳೆ.

ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ಅವರ ಪುತ್ರಿ ಜಮೀಲಾ ಸನಿಕ (4) ಮೃತಪಟ್ಟ ಬಾಲಕಿ.
ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿದ್ದ ಈಕೆ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ.