ಡೈಲಿ ವಾರ್ತೆ: 25/Sep/2023

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮಸೀದಿಯ ಮೌಲ್ವಿಯ ಬಂಧನ

ಕುಮಟಾ: ಪಟ್ಟಣದ ಮಸೀದಿಯೊಂದರಲ್ಲಿ ಕುರಾನ್ ಓದಲು ಬರುತಿದ್ದ ಅಪ್ರಾಪ್ತ ಬಾಲಕನ ಮೇಲೆ ಮೌಲ್ವಿಯೊಬ್ಬ ಮಸೀದಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಪೋಕ್ಸೊ ಪ್ರಕರಣ ದಾಖಲಿಸಿ ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಮೌಲ್ವಿ ಪಶ್ಚಿಮ ಬಂಗಾಳ ಮೂಲದ ಅಬ್ಬುಸ್ ಸಮದ್ ಜಿಯಾಯಿ (25) ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿ ಸೆ. 23ರ ರಾತ್ರಿ 8 ಗಂಟೆ ಸರಿಸುಮಾರಿನಲ್ಲಿ ಖುರಾನ್ ಓದಲು ಬಂದ ಬಾಲಕನ ಗುಪ್ತಾಂಗ ಸ್ಪರ್ಶಿಸಿ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಹಾಗೂ ಕೆಲ ದಿನಗಳ ಹಿಂದೆಯೂ ಹೀಗೆಯೇ ದೌರ್ಜನ್ಯ ಎಸಗಿದ್ದ ಎಂದು ಬಾಲಕನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪೋಕ್ಸೋ ಕಾನೂನಿನನ್ವಯ ಪ್ರಕರಣ ದಾಖಲಿಸಿಕೊಂಡ ಕುಮಟಾ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ಬಳಿಕ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರು ಪಡಿಸಿದ್ದಾರೆ. ಪ್ರಕರಣ ಸಂಬಂಧ ಆರೋಪಿತನನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.