ಡೈಲಿ ವಾರ್ತೆ:30/Sep/2023

ಸುರತ್ಕಲ್: ಕಾರು ಹಾಗೂ ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಸುರತ್ಕಲ್: ಭೀಕರ ರಸ್ತೆ ಅಪಘಾತ ಸಂಭವಿಸಿ ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜ ಗುಜ್ಜಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ಹೊಸಬೆಟ್ಟುವಿನಲ್ಲಿ ನಡೆದಿದೆ.

ಸುಮಾರು 2.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ತಮಿಳುನಾಡು ನೊಂದಣಿಯ ಕಾರು ಇದಾಗಿದೆ. ಪೊಲೀಸರ ಮತ್ತು ಸಾರ್ವಜನಿಕರು ಸಹಕಾರದಿಂದ ಎರಡು ಗಂಟೆಯ ಪರಿಶ್ರಮದಿಂದ ಶವವನ್ನು ಹೊರತೆಗೆಯಲಾಯಿತು ಎನ್ನಲಾಗಿದೆ.

ಕಾರಿನಲಿದ್ದ ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.