ಡೈಲಿ ವಾರ್ತೆ: 04/OCT/2023

ದಕ್ಷಿಣ ಕನ್ನಡ:ಕೌಟುಂಬಿಕ ಕಲಹಕ್ಕೆ ಬೇಸತ್ತು ವೃದ್ದಸಹೋದರಿಯರು ಆತ್ಮಹತ್ಯೆಗೆ ಶರಣು

ಮಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ವೃದ್ಧ ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕದ್ರಿ ಕಂಬಳ ಪ್ರದೇಶದಲ್ಲಿ ನಡೆದಿದೆ.
ಲತಾ ಭಂಡಾರಿ(70) ಹಾಗೂ ಸುಂದರಿ ಶೆಟ್ಟಿ(80) ಆತ್ಮಹತ್ಯೆ ಮಾಡಿಕೊಂಡವರು.

ಇನ್ನು ಮೃತ ಲತಾ ಪತಿ ಜಗನ್ನಾಥ ಭಂಡಾರಿ ಕೆಲಸಕ್ಕೆ ತೆರಳಿದ್ದ ವೇಳೆ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿದ್ದು, ಜಗನ್ನಾಥ ಭಂಡಾರಿ ಅವರು ಮನೆಗೆ ಹಿಂದಿರುಗಿದಾಗ ಘಟನೆ ಬೆಳಕಿಗೆ ಬಂದಿದೆ.

ಈ ಕುರಿತು ಸ್ಥಳಕ್ಕೆ ಕದ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.