ಡೈಲಿ ವಾರ್ತೆ: 09/OCT/2023

ಹೊಸಪೇಟೆ: ಟಿಪ್ಪರ್ ಮತ್ತು ಕ್ರೂಸರ್ ನಡುವೆ ಭೀಕರ ರಸ್ತೆ ಅಪಘಾತ – 5 ಕ್ಕೂ ಹೆಚ್ಚು ಜನರು ಸಾವು

ವಿಜಯನಗರ : ಟಿಪ್ಪರ್ ಮತ್ತು ಕ್ರೂಸರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆ ನಗರದ ಹೊರವಲಯದ ಟನಲ್ ಬಳಿ ಟಿಪ್ಪರ್, ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಅಪಘಾತಕ್ಕಿಡಾಗಿದೆ. ಈ ಅಪಘಾತದಲ್ಲಿ ಸಿಲುಕಿರುವ ಶವಗಳನ್ನು ಹೊರ ತೆಗೆಯಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ.
ಕ್ರೂಸರ್‌ ವಾಹನವು ಪೂರ್ತಿ ಛಿದ್ರ ಛಿದ್ರಗೊಂಡಿದೆ. ಟಿಪ್ಪರ್ ಮುಂಭಾಗ ಪೂರ್ತಿ ಜಖಂಗೊಂಡಿದೆ.

ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ದುರ್ಘಟನೆ ನಡೆದಿದೆ‌. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.