ಡೈಲಿ ವಾರ್ತೆ: 17/OCT/2023

ಕಾರು ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ: ಇಬ್ಬರು ಮಹಿಳೆಯರ ಮೃತ್ಯು, 8 ಮಂದಿಗೆ ಗಾಯ!

ಬಾಗಲಕೋಟೆ: ಕಾರು ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿಯಲ್ಲಿ ನಡೆದಿದೆ.

ಮೃತ ಮಹಿಳೆಯರು ಗೂಡ್ಸ್ ವಾಹನದಲ್ಲಿದ್ದು, ಹುನಗುಂದದಿಂದ ಅಮೀನಗಢ ಮಾರ್ಗವಾಗಿ ಬರುತ್ತಿದ್ದರು. ಈ ವೇಳೆ ಕಾರು ಮತ್ತು ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ಎಂಟು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಏರ್‌ಬ್ಯಾಗ್ ಓಪನ್ ಆದ ಕಾರಣ ಕಾರು ಚಾಲಕ ಸಾವಿನಿಂದ ಪಾರಾಗಿದ್ದಾನೆ.

ಮೃತರು ರಾಯಚೂರು ಜಿಲ್ಲೆಯ ಲಿಂಗಸೂರು ಭಾಗದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.