ಡೈಲಿ ವಾರ್ತೆ: 18/OCT/2023

ಅರಣ್ಯಾಧಿಕಾರಿಗೆ ‘ಲೋಫರ್ ನನ್ಮಗ’ ಎಂದು ನಿಂದಿಸಿದ ಆರೋಪ – ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲು!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಎಫ್‍ಐಆರ್ ದಾಖಲಾಗಿದೆ.

ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲ ದಿನಗಳ ಹಿಂದೆ ಅಂದರೆ ಅ. 8 ರಂದು ಚಾರ್ಮಾಡಿ ಅರಣ್ಯದಲ್ಲಿ ಮನೆ ನಿರ್ಮಾಣ-ತೆರವು ಸಂಬಂಧ ಅರಣ್ಯಾಧಿಕಾರಿಗಳು-ಶಾಸಕರ ನಡುವೆ ಭಾರೀ ಜಟಾಪಟಿ ನಡೆದಿತ್ತು. ಈ ವೇಳೆ ಅರಣ್ಯಾಧಿಕಾರಿ ಜಯಪ್ರಕಾಶ್ ಗೆ ‘ಲೋಫರ್ ನನ್ ಮಗ’ ಅಂತಾ ಶಾಸಕರು ಬೈದಿದ್ದಾರೆ ಎಂದು ದೂರು ನೀಡಲಾಗಿತ್ತು.

ಇದರಿಂದ ಬೇಸರಗೊಂಡ ಅರಣ್ಯಾಧಿಕಾರಿ ಶಾಸಕ ಹಾಗೂ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಐಪಿಸಿ 1860(ಯು/ಎಸ್-143, 353, 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 149) ಅಡಿ ಪ್ರಕರಣ ದಾಖಲಾಗಿದೆ. ಸದ್ಯ ಹರೀಶ್ ಪೂಂಜಾ ಅವರು ಬಂಧನದ ಭೀತಿಯಲ್ಲಿದ್ದಾರೆ.