ಡೈಲಿ ವಾರ್ತೆ: 18/OCT/2023
ಬಂಟ್ವಾಳ: ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಪೊಲೀಸ್ ದಾಳಿ – ಆರೋಪಿಗಳು ಪರಾರಿ, ಸೊತ್ತುಗಳು ವಶಕ್ಕೆ
ಬಂಟ್ವಾಳ : ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೋಲೀಸರು ದಾಳಿ ನಡೆಸಿದ ವೇಳೆ ಆರೋಪಿಗಳು ಸೊತ್ತುಗಳನ್ನು ಬಿಟ್ಟು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿ ಎಂಬಲ್ಲಿ ನಡೆದಿದೆ.
ಸಿ.ಇ.ಎನ್ ಅಪರಾಧ ಪೋಲೀಸ್ ಠಾಣಾ ಪೋಲೀಸ್ ಉಪನಿರೀಕ್ಷಕ ಮಂಜುನಾಥ ಟಿ.ಅವರು ಕಚೇರಿ ಕಾರ್ಯದ ನಿಮಿತ್ತ ಮಂಚಿ ರಸ್ತೆಯಾಗಿ ಹೋಗುತ್ತಿದ್ದ ವೇಳೆ ಮಂಚಿ – ಮುಡಿಪು ರಸ್ತೆಯ ಕಂಡತಟ್ಟು ಗುಡ್ಡ ತಲುಪಿದಾಗ ಅಲ್ಲಿ ಕೆಂಪು ಕಲ್ಲು ಗಣಿಗಾರಿಕೆ ನಡೆಸುವುದು ಕಂಡು ಬಂದಿದೆ.
ಅಲ್ಲಿಗೆ ದಾಳಿ ನಡೆಸಿದಾಗ ಆರೋಪಿಗಳು ಕೆಂಪು ಕಲ್ಲು ಗಣಿಗಾರಿಕೆಗೆ ಬಳಸುತ್ತಿರುವ ಯಂತ್ರವನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.
ಈ ಬಗ್ಗೆ ಅವರು ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ಮಾಹಿತಿ ನೀಡಿದ್ದು, ಪರವಾನಿಗೆ ಇಲ್ಲದೆ ಅಕ್ರಮವಾಗಿ ಗಣಿಗಾರಿಕೆ ಮಾಡಲು ಬಳಸಿದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.